×
Ad

‘ಇಳಯರಾಜ ದೇವಸ್ಥಾನ ಪ್ರವೇಶಕ್ಕೆ ತಡೆ’ ಅಸ್ಪೃಶ್ಯತೆ ಜೀವಂತ ಆಗಿರುವುದಕ್ಕೆ ಉದಾಹರಣೆ : ಡಾ.ಮಹದೇವಪ್ಪ

Update: 2024-12-16 21:53 IST

ಎಚ್.ಸಿ.ಮಹದೇವಪ್ಪ 

ಬೆಳಗಾವಿ (ಸುವರ್ಣ ವಿಧಾನಸೌಧ) : ‘ಸಂಗೀತ ಮಾಂತ್ರಿಕ, ಹಾಲಿ ರಾಜ್ಯಸಭಾ ಸದಸ್ಯ ಇಳಯರಾಜ ಅವರನ್ನು ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಪ್ರವೇಶಿಸಲು ನಿರಾಕರಿಸಿದ ಘಟನೆಯು ನಿಜಕ್ಕೂ ಅವಮಾನಕರ ಸಂಗತಿ ಆಗಿದ್ದು, ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆಯು ಇನ್ನೂ ಜೀವಂತವಾಗಿದೆ ಎಂಬುದನ್ನು ಸಾರಿ ಹೇಳುತ್ತಿದೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಸೋಮವರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿ, ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದವರ ಸ್ಥಿತಿಯೇ ಹೀಗಿದ್ದರೆ, ಜನಸಾಮಾನ್ಯರಾಗಿ ಜೀವಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಪರಿಸ್ಥಿತಿ ಏನಾಗಿರಬೇಕು ಎಂಬುದನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಭಾರತೀಯ ಜನಗಳಾದ ನಾವು ಭ್ರಾತೃತ್ವ ಮತ್ತು ಐಕ್ಯತೆಯಿಂದ ಇರಬೇಕೆಂಬ ಸಂವಿಧಾನದ ಆಶಯವನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳಬೇಕಾದ್ದು ಈ ಹೊತ್ತಿನ ಜರೂರು ಎಂಬುದನ್ನು ಇಳಯರಾಜರ ಈ ಘಟನೆಯು ನಮಗೆ ನೆನಪಿಸುತ್ತದೆ’ ಎಂದು ಹೇಳಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News