×
Ad

ಬೆಳಗಾವಿ | ಹಳಿ‌ ತಪ್ಪಿದ ಗೂಡ್ಸ್ ರೈಲು; ತಪ್ಪಿದ ಅನಾಹುತ

Update: 2025-04-15 12:48 IST

ಸಾಂದರ್ಭಿಕ ಚಿತ್ರ | PTI

ಬೆಳಗಾವಿ: ಜಿಂದಾಲ್‌ ಕಾರ್ಖಾನೆಗೆ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ‌ ತಪ್ಪಿದ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.

ಬೆಳಗಾವಿ ರೈಲ್ವೆ ನಿಲ್ದಾಣದಿಂದ ಅರ್ಧ ಕಿಲೋ ಮೀಟರ್ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದ ಕಾರಣ ಸುಮಾರು 4 ಗಂಟೆಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು.

ಒಂದು ಹಳಿಯಿಂದ ಇನ್ನೊಂದು ಹಳಿಗೆ ರೈಲನ್ನು ಬದಲಾಯಿಸುವ ಸಂದರ್ಭದಲ್ಲಿ ಈ ವ್ಯತ್ಯಾಸವಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ - ಮಿರಜ್ ಮಾರ್ಗದಲ್ಲಿ ಎಲ್ಲ ರೈಲುಗಳು ಸಂಚಾರ ಸ್ಥಗಿತಗೊಂಡಿದ್ದು, ದುರಸ್ತಿ ಕಾರ್ಯ ಮುಗಿದ ಬಳಿಕ ಆರಂಭಗೊಳ್ಳಲಿವೆ. ಈಗಾಗಲೇ ಮಿರಜ್‌ನಿಂದ ಬರುತ್ತಿದ್ದ ಚಾಲುಕ್ಯ ಶರಾವತಿ ಎಕ್ಸ್‌ಪ್ರೆಸ್, ಎಲ್‌ಟಿಟಿ ದಾದರ್, ಅಜ್ಮೇರ್ ಎಕ್ಸ್‌ಪ್ರೆಸ್‌ ಮಾರ್ಗ ಮಧ್ಯದಲ್ಲಿಯೇ ನಿಂತುಕೊಂಡಿವೆ. ಬೆಳಗಾವಿಯಿಂದ ಹೊರಟಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್, ಬೆಂಗಳೂರು ಜೋದ್ಪುರ್ ಎಕ್ಸ್‌ಪ್ರೆಸ್, ಬೆಂಗಳೂರಿಂದ ಭಗತ್ ಕೋಟಿ, ಕ್ಯಾಸಲ್ ರಾಕ್- ಮಿರಜ್ ಪ್ಯಾಸೆಂಜರ್, ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಸದ್ಯ ಹಳಿ ತೆರವು ಕಾರ್ಯ ಪ್ರಗತಿಯಲ್ಲಿದ್ದು, ತ್ವರಿತ ಗತಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News