ಬೆಳಗಾವಿ| ನಿರಂತರ ಮಳೆಗೆ ಮನೆಯ ಗೋಡೆ ಕುಸಿತ : ಮಹಿಳೆ ಮೃತ್ಯು, ಇಬ್ಬರಿಗೆ ಗಾಯ
ಬೆಳಗಾವಿ : ಬೆಳಗಾವಿ ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸುತ್ತಿದೆ. ಮನೆಯೊಂದರ ಗೋಡೆ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿ, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಗೋಕಾಕ್ ಸಂಗಮ ನಗರದ ಫರೀದಾ ಬಾನು ಶಕೀಲ್ ಅಹ್ಮದ್ ಕನವಾಡ(50) ಮೃತ ಮಹಿಳೆ. ಅವರ ಪುತ್ರ ಮತ್ತು ಪುತ್ರಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಕಾಕ್ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಮಣ್ಣಿನ ಗೋಡೆ ಕುಸಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಸ್ಥಳಕ್ಕೆ ಗೋಕಾಕ್ ತಹಶೀಲ್ದಾರ್ ಮೋಹನ್ ಭಸ್ಮೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗೋಕಾಕ್ ತಹಶೀಲ್ದಾರ್ ಮೋಹನ್ ಭಸ್ಮೆ ಅವರು ಪರಿಶೀಲನೆ ನಡೆಸಿ ಮೃತ ಮಹಿಳೆಯ ಕುಟುಂಬಸ್ಥರಿಗೆ ಸರಕಾರದ ಮಾರ್ಗಸೂಚಿ ಪ್ರಕಾರ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.