Belagavi | 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ | PC : freepik
ಬೆಳಗಾವಿ : ಇಲ್ಲಿನ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ.
ಮಣಿಕಂಠ ದಿನ್ನಿಮನಿ (28) ಮತ್ತು ಮತ್ತೊಬ್ಬ ಆರೋಪಿ ಈರಣ್ಣ ಸಂಕಮ್ಮನವರ್ ಮೇಲೆ ಪ್ರಕರಣ ದಾಖಲಾಗಿದೆ.
ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಹಿಟ್ಟಿನ ಗಿರಣಿಗೆ ತೆರಳಿದ್ದ ಬಾಲಕಿಯನ್ನು, ಆರೋಪಿಗಳು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ.
ಘಟನೆ ನವೆಂಬರ್ 23ರಂದು ನಡೆದಿದ್ದರೂ, ಆರೋಪಿಗಳು ಜೀವ ಬೆದರಿಕೆ ಹಾಕಿದ ಕಾರಣ ಬಾಲಕಿಯ ಕುಟುಂಬಸ್ಥರು ದೂರು ನೀಡಲು ಹಿಂಜರಿದಿದ್ದರು ಎನ್ನಲಾಗಿದೆ. ನಿನ್ನೆ (ಡಿಸೆಂಬರ್ 1) ದೂರು ದಾಖಲಾಗಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದಾಖಲಿಸಿಕೊಂಡಿದ್ದಾರೆ.
ಅತ್ಯಾಚಾರ ಎಸಗಿದ ನಂತರ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.