Belagavi | ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ | PC : gemini AI
ಬೆಳಗಾವಿ : ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಣಿಕಂಠ ದಿನ್ನಿಮನಿ (28) ಮತ್ತು ಈರಣ್ಣ ಸಂಕಮ್ಮನವರ್ (28) ಎಂದು ಗುರುತಿಸಲಾಗಿದೆ. ನವೆಂಬರ್ 23 ರಂದು ಘಟನೆಯು ನಡೆದಿದ್ದು, ಮನೆಯ ಸಮೀಪದ ಹಿಟ್ಟಿನ ಗಿರಣಿಗೆ ತೆರಳಿದ್ದ ಬಾಲಕಿಯನ್ನು ಇಬ್ಬರು ಆರೋಪಿಗಳು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಜೀವ ಬೆದರಿಕೆ ಹಾಕಿದ್ದರಿಂದ ಬಾಲಕಿ ಹಾಗೂ ಕುಟುಂಬ ಸದಸ್ಯರು ದೂರು ನೀಡಲು ಹಿಂಜರಿದಿದ್ದು, ಡಿಸೆಂಬರ್ 1ರಂದು ದೂರು ದಾಖಲಾಗಿದೆ. ಇದರ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ʼದೂರು ಸ್ವೀಕರಿಸಿದ ತಕ್ಷಣ ಇಬ್ಬರು ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ. ಪೊಲೀಸರು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗಿದʼ ಎಂದು ಹೇಳಿದರು.