×
Ad

Belagavi | ಪ್ಲಾಸ್ಟಿಕ್ ಬಾಟಲ್ ಆರಿಸುವ ನೆಪದಲ್ಲಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಆರೋಪ; ಮಹಿಳೆಯರನ್ನು ಕಂಬಕ್ಕೆ ಕಟ್ಟಿದ ಗ್ರಾಮಸ್ಥರು!

Update: 2025-12-27 20:49 IST

ಬೆಳಗಾವಿ : ಮಹಾರಾಷ್ಟ್ರ ಮೂಲದ ಮಹಿಳೆಯರು ಪ್ಲಾಸ್ಟಿಕ್ ಬಾಟಲ್ ಆರಿಸುವ ನೆಪದಲ್ಲಿ ಗ್ರಾಮಕ್ಕೆ ಬಂದು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಮದಭಾವಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಗ್ರಾಮಕ್ಕೆ ಬಾಟಲ್ ಆರಿಸಲು ಬಂದಿದ್ದ ಮಹಿಳೆಯರು, ಅದೇ ಗ್ರಾಮದ ದೇವಸ್ಥಾನದಲ್ಲಿದ್ದ ಹೋಳಿಗೆ ಮಣಿಗಳನ್ನು ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿದ ಗ್ರಾಮಸ್ಥರು ತಕ್ಷಣವೇ ಮಹಿಳೆಯರನ್ನು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ್ದಾರೆ ಎನ್ನಲಾಗಿದೆ.

ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿ ದೊರೆತ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News