Belagavi | ಅಪರಿಚಿತ ವಾಹನ ಢಿಕ್ಕಿ; ಬೈಕ್‌ನಲ್ಲಿದ್ದ ಮೂವರು ಮೃತ್ಯು
Update: 2026-02-03 23:45 IST
ಸಾಂದರ್ಭಿಕ ಚಿತ್ರ
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಸಮೀಪ ಸೋಮವಾರ ರಾತ್ರಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮೂವರು ಸಾವನ್ನಪಿರುವುದು ವರದಿಯಾಗಿದೆ.
ಮೊರಬ್ ಗ್ರಾಮದ ನಿವಾಸಿ ಗಜಾನನ ಮಹಾದೇವ ವಡೆಯರ್ ಹಾಗೂ ಮುಗಳಖೋಡ ಗ್ರಾಮದ ನಿವಾಸಿ ಮಹಾದೇವ ಮಲ್ಲಪ್ಪ ಗೋಲಭಾವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ಮಾಳಪ್ಪ ಮಲ್ಲಪ್ಪ ಗೋಲಭಾವಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಣವಾದ ವಾಹನದ ಚಾಲಕ ವಾಹನ ಸಮೇತ ಪರಾರಿಯಾಗಿದ್ದು, ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.