ಬೆಳಗಾವಿ : ಅತಿವೇಗವಾಗಿ ಬಂದ ಟಿಪ್ಪರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ವರದಿಯಾಗಿದೆ.

ಹುಕ್ಕೇರಿ ತಾಲೂಕಿನ ಕೆ.ಎಂ. ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19) ಹಾಗೂ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅತಿವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಟಿಪ್ಪರ್‌ನ್ನು ಸ್ಥಳದಲ್ಲಿಯೇ ಬಿಟ್ಟು ಚಾಲಕ ಪರಾರಿಯಾಗಿದ್ದ. ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor