×
Ad

Belagavi | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Update: 2026-01-06 16:47 IST

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ನಗರದ ಕ್ಲಬ್ ರಸ್ತೆಯಲ್ಲಿ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ವೇಳೆ, ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಾಲಕನ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಎಂಬುವರೇ ಗಾಯಗೊಂಡವರು ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಬಸವಂತನ ಎದೆ, ಭುಜ ಹಾಗೂ ತೊಡೆ ಸೇರಿ ನಾಲ್ಕು ಕಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡ ಬಸವಂತನನ್ನು ತಕ್ಷಣ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಡಿಸಿಪಿ, ಎಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃಣಾಲ್ ಹೆಬ್ಬಾಳ್ಕರ್ ಸಹ ಆಸ್ಪತ್ರೆಗೆ ಆಗಮಿಸಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು.

ಈ ಘಟನೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News