ಬೆಳಗಾವಿ : ಆಸ್ತಿ ವಿಚಾರವಾಗಿ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಒಂದೇ ಕುಟುಂಬದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಜೀವಾಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕೊಲೆಯಾದವರನ್ನು ಗ್ರಾಮದ ನಿವಾಸಿಗಳಾದ ಬಸವ್ವ ಭೀಮಪ್ಪ ನಾಯ್ಕರ (60) ಮತ್ತು ರಮೇಶ ಹನಮಂತ ನಾಯ್ಕರ (29) ಎಂದು ಗುರುತಿಸಲಾಗಿದೆ. ಕೊಲೆಯಾದವರು ಸೋದರತ್ತೆ ಮತ್ತು ಸೋದರಳಿಯ ಎಂದು ತಿಳಿದುಬಂದಿದೆ. ಆಸ್ತಿ ವಿವಾದವೇ ಈ ಭೀಕರ ಜೋಡಿ ಕೊಲೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮುರಗೋಡ ಪೊಲೀಸ್ ಠಾಣೆಯ ಅಧಿಕಾರಿಗಳು, ಡಿವೈಎಸ್ಪಿ ಮಡಿವಾಳರ ಹಾಗೂ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಕೆ. ರಾಮರಾಜನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಂದೇ ಗ್ರಾಮದಲ್ಲಿ ಇಬ್ಬರ ಹತ್ಯೆಯಾಗಿರುವುದು ಜೀವಾಪೂರ ಗ್ರಾಮಸ್ಥರಲ್ಲಿ ತೀವ್ರ ಆತಂಕ ಹಾಗೂ ಆಘಾತ ಮೂಡಿಸಿದೆ.

ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹತ್ಯೆಯ ಹಿಂದಿನ ನಿಖರ ಕಾರಣ ಹಾಗೂ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಶಿವಾನಂದ ಚಿಕ್ಕಮಠ/ವಾರ್ತಾಭಾರತಿ

contributor

ಶಿವಾನಂದ ಜಿ.ಚಿಕ್ಕಮಠ ಅವರು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ 15ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ಇವರು 'ವಾರ್ತಾಭಾರತಿ' ಪತ್ರಿಕೆಯ ಬೆಳಗಾವಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.