×
Ad

Belagavi | ಬಾಲಕನಿಂದ ಕಾರು ಚಾಲನೆ; ತಂದೆಗೆ 25,000 ರೂ. ದಂಡ

Update: 2026-06-09 00:03 IST

ಸಾಂದರ್ಭಿಕ ಚಿತ್ರ (PTI)

ಬೆಳಗಾವಿ: ನಗರದ ರಾಣಿ ಚನ್ನಮ್ಮನ ವೃತ್ತದ ಬಳಿ ಅಪ್ರಾಪ್ತ ಬಾಲಕನೊಬ್ಬ ಕಾರು ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೋಟಾರು ವಾಹನ ಕಾಯ್ದೆಯಡಿ ನೋಟಿಸ್‌ ಜಾರಿಗೊಳಿಸಲಾಗಿದ್ದು, ವಾಹನದ ಮಾಲಕತ್ವ ಹೊಂದಿರುವ ತಂದೆಗೆ 25,000 ರೂ. ದಂಡ ವಿಧಿಸಲಾಗಿದೆ.

ಸೋಮವಾರ ಬೆಳಿಗ್ಗೆ ಸುಮಾರು 10.50ರ ವೇಳೆಗೆ ರಾಣಿ ಚನ್ನಮ್ಮನ ವೃತ್ತದ ಬಳಿ ಬಾಲಕನೊಬ್ಬ ಕಾರು ಚಲಾಯಿಸುತ್ತಿರುವುದನ್ನು ಗಮನಿಸಿದ ಸಂಚಾರ ಪೊಲೀಸರು, ವಾಹನ ಸಮೇತ ಬಾಲಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದರು. ಬಳಿಕ ಪಾಲಕರನ್ನು ಠಾಣೆಗೆ ಕರೆಯಿಸಿ ಪ್ರಕರಣದ ಕುರಿತು ಮಾಹಿತಿ ನೀಡಿ ಅಗತ್ಯ ತಿಳಿವಳಿಕೆ ನೀಡಿದರು.

ಈ ಕುರಿತು ಮಾತನಾಡಿದ ಭೂಷಣ ಬೊರಸೆ, ಅಪ್ರಾಪ್ತರ ಕೈಗೆ ಯಾವುದೇ ಕಾರಣಕ್ಕೂ ವಾಹನಗಳನ್ನು ಚಾಲನೆಗೆ ನೀಡಬಾರದು ಎಂದು ಪಾಲಕರಿಗೆ ಎಚ್ಚರಿಕೆ ನೀಡಿದರು.

ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ರಸ್ತೆ ಸುರಕ್ಷತೆ ಕುರಿತು ಜಾಗೃತಿಯಿಂದ ವರ್ತಿಸುವ ಮೂಲಕ ತಮ್ಮ ಹಾಗೂ ಇತರರ ಜೀವ ರಕ್ಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News