ಸಾಂದರ್ಭಿಕ ಚಿತ್ರ 

ಬೆಳಗಾವಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ನಿಪ್ಪಾಣಿ ತಹಶೀಲ್ದಾರ್ ಸುರೇಶ್ ಮುಂಜೆ ಅವರಿಗೆ ಸೇರಿದ ನಿಪ್ಪಾಣಿ ಪಟ್ಟಣದ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಅಥಣಿ ಪಟ್ಟಣದಲ್ಲಿರುವ ಅವರ ಮನೆ ಹಾಗೂ ಮೂಡಲಗಿ ಪಟ್ಟಣದಲ್ಲಿರುವ ಅವರ ಮಾವನ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳು ಹಾಗೂ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

ತಹಶೀಲ್ದಾರ್ ಸುರೇಶ್ ಮುಂಜೆ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ನಡೆದಿರುವ ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳು ಮತ್ತು ಆಸ್ತಿ ಸಂಬಂಧಿತ ಮಾಹಿತಿಯನ್ನು ಪರಿಶೀಲಿಸುತ್ತಿದ್ದಾರೆ.

ದಾಳಿಯ ವೇಳೆ ಪತ್ತೆಯಾದ ದಾಖಲೆಗಳು ಹಾಗೂ ಇತರ ಮಾಹಿತಿಗಳ ಕುರಿತು ಲೋಕಾಯುಕ್ತ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor