×
Ad

ಬೆಳಗಾವಿ | ವಿವಾಹಿತ ಮಹಿಳೆಗೆ ಇರಿದು, ಅದೇ ಚಾಕುವಿನಿಂದ ಚುಚ್ಚಿಕೊಂಡು ಯುವಕ ಆತ್ಮಹತ್ಯೆ

Update: 2025-08-15 19:01 IST

ಆನಂದ ರಾಜು ಸುತಾರ(30) 

ಬೆಳಗಾವಿ : ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ವಿವಾಹಿತ ಮಹಿಳೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಅದೇ ಚಾಕುವಿನಿಂದ ತಾನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಬೀಡಿ ಗ್ರಾಮದ ರೇಷ್ಮಾ ಶಿವಾನಂದ ತಿರವೀರ(28) ಕೊಲೆಯಾದ ಮಹಿಳೆ, ಆನಂದ ರಾಜು ಸುತಾರ(30) ಕೊಲೆಗೈದು ಬಳಿಕ ಆತ್ಮಹತ್ಯೆ ಮಾಡಿದ್ದಾನೆ. ಇಬ್ಬರು ಒಂದೇ ಗ್ರಾಮದವರಾಗಿದ್ದು, ಕಳೆದ ಎರಡು ವರ್ಷಗಳಿಂದ ಪರಪಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕೊಲೆಗೆ ಅನೈತಿಕ ಸಂಬಂಧ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

ಮಹಿಳೆಗೆ ಮದುವೆಯಾಗಿ ಎರಡು ಮಕ್ಕಳಿದ್ದರೆ, ಆನಂದನಿಗೆ ಮದುವೆ ಆಗಿ ಮೂರು ಮಕ್ಕಳಿದ್ದಾರೆನ್ನಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಇಬ್ಬರು ಪರಸ್ಪರ ಪ್ರೀತಿಸುತ್ತಿರುವ ವಿಷಯ ಮಹಿಳೆಯ ಗಂಡನಿಗೆ ತಿಳಿದಿತ್ತು. ಇದರಿಂದ ಮನೆಯಲ್ಲಿ ಸಣ್ಣಪುಟ್ಟ ಗಲಾಟೆಗಳು ಶುರುವಾಗಿತ್ತು. ಅಲ್ಲದೇ ಮಹಿಳೆಯ ಗಂಡ ಆನಂದ ವಿರುದ್ಧ ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ಪೊಲೀಸರು ಆನಂದನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಇದರಿಂದ ಕುಪಿತನಾಗಿದ್ದ ಆನಂದ ಸುತಾರ ಗುರುವಾರ ರಾತ್ರಿ ಮಹಿಳೆಯ ಗಂಡ ಹಾಲು ಹಾಕಲು ಡೈರಿಗೆ ಹೋದ ಸಮಯದಲ್ಲಿ ಹಿಂಬಾಗಿಲಿನಿಂದ ಅವರ ಮನೆಗೆ ನುಗ್ಗಿ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ. ಬಳಿಕ ಅದೇ ಚಾಕುವಿನಿಂದ ಆನಂದ ಕೂಡ ಚುಚ್ಚಿಕೊಂಡಿದ್ದಾನೆ. ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ‌ ಮಾರ್ಗ ಮಧ್ಯದಲ್ಲೇ ಆನಂದ ಮೃತದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News