×
Ad

BELAGAVI | ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಯಾರೂ ಮಸಿ ಬಳಿದಿಲ್ಲ; ಮರದಿಂದ ದ್ರವ ಪದಾರ್ಥ ಬಿದ್ದಿದೆ: ಪೊಲೀಸ್ ಆಯುಕ್ತರ ಸ್ಪಷ್ಟನೆ

Update: 2026-02-22 12:25 IST

ಬೆಳಗಾವಿ: ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಎಸೆದಿದ್ದಾರೆ ಎಂಬ ಸುದ್ದಿ ಇದೀಗ ಹೊಸ ತಿರುವು ಪಡೆದಿದೆ. ಪ್ರತಿಮೆಗೆ ಯಾರು ಮಸಿ ಬಳಿದಿಲ್ಲ. ಸಮೀಪದ ಮರದಿಂದ ಪ್ರತಿಮೆಯ ಮೇಲೆ ದ್ರವ ಪದಾರ್ಥ ಬಿದ್ದಿದೆ ಎಂದು ನಗರ ಪೊಲೀಸ್ ಆಯಕ್ತರು ಭೂಷಣ ಬೊರಸೆ ಸ್ಪಷ್ಟಪಡಿಸಿದ್ದಾರೆ.

ಗುರುವಾರ ರಾತ್ರಿ ಪ್ರತಿಮೆ ಮೇಲೆ ದ್ರವರೂಪದ ವಸ್ತು ಬಿದ್ದಿದ್ದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿತ್ತು. ತಕ್ಷಣವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆ ದ್ರವವನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಪ್ರಯೋಗಾಲಯದ ವರದಿ ಪ್ರಕಾರ, ಅದು ಯಾವುದೇ ರೀತಿಯ ಮಸಿ ಅಥವಾ ಬಣ್ಣವಲ್ಲ. ಸಮೀಪದ ಮರದಿಂದ ಸುರಿದ ದ್ರವ ಪದಾರ್ಥವೇ ಪ್ರತಿಮೆ ಮೇಲೆ ಬಿದ್ದಿದೆ ಎಂಬುದು ದೃಢಪಟ್ಟಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇನ್ನೂ ಪ್ರತಿಮೆಯಿಂದ ಸುಮಾರು 10 ಮೀಟರ್ ದೂರದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಪೊಲೀಸರು ಪರಿಶೀಲಿಸಿದ್ದಾರೆ. ಇಡೀ ರಾತ್ರಿ ಯಾರೂ ಪ್ರತಿಮೆಯ ಹತ್ತಿರ ಹೋಗಿಲ್ಲ ಹಾಗೂ ಯಾವುದೇ ವಸ್ತು ಎಸೆಯಲಿಲ್ಲ ಎಂಬುದು ದೃಶ್ಯಗಳಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಜನರು ಊಹಾಪೋಹಗಳಿಗೆ ಕಿವಿಗೊಡದೆ, ಶಾಂತಿ ಕಾಪಾಡಬೇಕು ಎಂದು ಕಮಿಷನರ್ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News