×
Ad

ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ‘ಕೌಶಲ್ಯ ರಥ ಕಾರ್ಯಕ್ರಮ’

Update: 2025-12-16 22:52 IST

ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಳಗಾವಿ : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಕೌಶಲ್ಯ ರಥ ಕಾರ್ಯಕ್ರಮವನ್ನು ರಾಯಚೂರು, ಯಾದಗಿರಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅತಿ ಹಿಂದುಳಿದ ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಕೌಶಲ್ಯ ತರಬೇತಿಯನ್ನು ಪಡೆಯಲು ಪೂರಕವಾಗುವಂತೆ ಅವರಿರುವ ಸ್ಥಳಕ್ಕೆ ತೆರಳಿ ತರಬೇತಿ ನೀಡುವ ಸಂಬಂಧ ಸ್ಕಿಲ್ಸ್ ಆನ್ ವೀಲ್ಸ್(ಕೌಶಲ್ಯ ರಥ/ನೈಪುಣ್ಯ ರಥ) ವಿನೂತನ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.

ರಾಜ್ಯದ ಗ್ರಾಮೀಣ ಯುವಜನರಿಗೆ ಅಲ್ಪಾವಧಿ ಕೌಶಲ್ಯಾಧಾರಿತ ತರಬೇತಿಯೊಂದಿಗೆ ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. 2022-23ನೇ ಸಾಲಿನಲ್ಲಿ ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಲಾ 75 ಅಭ್ಯರ್ಥಿಗಳಿಗೆ ಅನುಕ್ರಮವಾಗಿ ಅಸಿಸ್ಟಂಟ್ ಬ್ಯೂಟಿ ಥೆರಪಿಸ್ಟ್ ಅಂಡ್ ಅಸಿಸ್ಟಂಟ್ ಎಲೆಕ್ಟ್ರಿಷಿಯನ್ ಜಾಬ್ ರೋಲ್ ನಡಿ ಹಾಗೂ 2023-24ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ಅಭ್ಯರ್ಥಿಗಳು ಮತ್ತು ಉಡುಪಿ ಜಿಲ್ಲೆಯಲ್ಲಿ 60 ಅಭ್ಯರ್ಥಿಗಳಿಗೆ ಅನುಕ್ರಮವಾಗಿ ಅಸಿಸ್ಟಂಟ್ ಎಲೆಕ್ಟ್ರಿಷಿಯನ್ ಅಂಡ್ ಅಸಿಸ್ಟಂಟ್ ಬ್ಯೂಟಿ ಥೆರಪಿಸ್ಟ್ ಜಾಬ್ ರೋಲ್ ನಡಿ ತರಬೇತಿಯನ್ನು ನೀಡಲಾಗಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News