Belagavi | ಹೊಲದಲ್ಲಿ ಕಸ ತೆಗೆಯುತ್ತಿದ್ದ ವೇಳೆ ಹಾವು ಕಚ್ಚಿ ಮಹಿಳೆ ಮೃತ್ಯು

Update: 2026-08-17 18:41 IST

ಬೆಳಗಾವಿ : ಹೊಲದಲ್ಲಿ ಕಸ ತೆಗೆಯುತ್ತಿದ್ದ ಮಹಿಳೆಯೊಬ್ಬರಿಗೆ ವಿಷಕಾರಿ ಹಾವು ಕಚ್ಚಿ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿರುವ ಘಟನೆ ರಾಯಬಾಗ ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ರಾಯಬಾಗ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರದ ನಿವಾಸಿ ಸತ್ಯವ್ವ ಶಿವಾನಂದ ಶಿಂಗೆ (43) ಎಂದು ಗುರುತಿಸಲಾಗಿದೆ.

ಸತ್ಯವ್ವ ಅವರು ಎಂದಿನಂತೆ ಸೋಮವಾರ ಹೊಲದಲ್ಲಿ ಕಸ ತೆಗೆಯುವ ಕೆಲಸಕ್ಕೆ ತೆರಳಿದ್ದರು. ಕೆಲಸ ಮಾಡುತ್ತಿದ್ದ ವೇಳೆ ಹೊಲದಲ್ಲಿ ವಿಷಕಾರಿ ಕೊಳಕು ಮಂಡಲ ಹಾವು ಅವರಿಗೆ ಕಚ್ಚಿದೆ ಎನ್ನಲಾಗಿದೆ.. ಹಾವು ಕಚ್ಚಿದ ತಕ್ಷಣ ತೀವ್ರ ಅಸ್ವಸ್ಥಗೊಂಡ ಸತ್ಯವ್ವ ಅವರನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News