×
Ad

ಬೆಳಗಾವಿ | SSLC ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಶಿಕ್ಷಕ ಬಂಧನ

Update: 2026-06-16 20:06 IST

ಸಾಂದರ್ಭಿಕ ಚಿತ್ರ (AI)

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕ ಶ್ರೀಶೈಲ ಕುಂಬಾರ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಉರ್ದು ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್ಸೆಸೆಲ್ಸಿ ವಿದ್ಯಾರ್ಥಿನಿಗೆ ಕನ್ನಡ ವಿಷಯದಲ್ಲಿ ಉತ್ತೀರ್ಣಗೊಳಿಸುವುದಾಗಿ ಆಮಿಷವೊಡ್ಡಿ ಶಿಕ್ಷಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಮಂಗಳವಾರ ವಿದ್ಯಾರ್ಥಿನಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಶಿಕ್ಷಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯ ವಿಷಯ ತಿಳಿದು ಶಾಲೆಗೆ ಆಗಮಿಸಿದ ವಿದ್ಯಾರ್ಥಿನಿಯ ಪಾಲಕರು ಹಾಗೂ ಇತರ ಪೋಷಕರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಶಾಲಾ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಬಳಿಕ ಶಿಕ್ಷಕನನ್ನು ವಶಕ್ಕೆ ಪಡೆದು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News