×
Ad

ಬೆಳಗಾವಿ: ನ್ಯಾಯಾಲಯದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ ಜಯೇಶ್ ಪೂಜಾರಿ

Update: 2024-06-12 13:19 IST

ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ನ್ಯಾಯಾಲಯ ಆವರಣದಲ್ಲಿ  ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, 'ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ' ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ‌ ಎನ್ನಲಾಗಿದೆ.

 ಈ ವೇಳೆ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದು  ವಿಚಾರಣೆ ಮುಂದುವರಿಸಿದ್ದಾರೆ. 

'ತಾನು ದಾವೂದ್ ಇಬ್ರಾಹಿಂ ತಂಡದಲ್ಲಿದ್ದೇನೆ' ಎಂದು ಹೇಳಿಕೊಂಡಿದ್ದ ಜಯೇಶ್ ಪೂಜಾರಿ, ಈ ಹಿಂದೆ ಜೈಲಿನಲ್ಲಿ ಇದ್ದುಕೊಂಡೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಕರೆ ಹಾಕಿದ್ದ‌ ಎಂದು ತಿಳಿದು ಬಂದಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News