Belagavi | ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್; ರಾಜ್ಯಪಾಲರಿಂದ ಸ್ವಾಗತ
Update: 2026-03-05 11:00 IST
ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಯಡೂರಿನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಬರಮಾಡಿಕೊಂಡರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.