×
Ad

ಬೆಳಗಾವಿಯ ಪ್ರಭಾಕರ್ ಕೋರೆ ಅವರಿಗೆ ಪದ್ಮಶ್ರೀ ಗರಿ

Update: 2026-01-25 20:51 IST

ಪ್ರಭಾಕರ ಕೋರೆ (Photo: klesociety.org) 

ಬೆಂಗಳೂರು: ‘ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ’(ಕೆಎಲ್‍ಇ)ಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭೆಯ ಮಾಜಿ ಸದಸ್ಯ ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದ್ದು, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿನ ಅವರ ಅನುಪಮ ಸೇವೆಯನ್ನು ಗುರುತಿಸಿ ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಯನ್ನು ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಮೂಲದ ಪ್ರಭಾಕರ ಕೋರೆ ಅವರು, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಅದ್ವಿತೀಯ ಸೇವೆಯನ್ನು ಗುರುತಿಸಿ ಪ್ರತಿಷ್ಟಿಯ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿಕ್ಷಣ ಪ್ರೇಮಿಯಾಗಿರುವ ಕೋರೆ ಅವರ ದೂರದೃಷ್ಟಿ ಹಾಗೂ ನಾಯಕತ್ವ ಗುಣಗಳೇ ಅವರನ್ನು ಇಷ್ಟೊಂದು ಎತ್ತರಕ್ಕೆ ಬೆಳೆಸಿವೆ ಎಂದು ಅವರ ಆಪ್ತರ ಅನಿಸಿಕೆಯಾಗಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿನ ಕೋರೆ ಅವರ ಸೇವೆ ಪರಿಗಣಿಸಿ ಅಮೆರಿಕದ ಪ್ರತಿಷ್ಠಿತ ಥಾಮಸ್ ಜಾಫರ್‍ಸನ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿದೆ. ಪ್ರಭಾಕರ ಕೋರೆ ಈ ಗೌರವ ಪಡೆದ ಮೊದಲ ಕನ್ನಡಿಗ. ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳೂ ಅವರನ್ನು ಅರಸಿ ಬಂದಿವೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಸರಕಾರ ಗೌರವಿಸಿದೆ. 2008ರಲ್ಲಿ ಕರ್ನಾಟಕ ವಿಶ್ವ ವಿದ್ಯಾನಿಲಯ ಹಾಗೂ 2013ರಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾನಿಲಯಗಳು ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿವೆ. ಇದೀಗ ಪದ್ಮಶ್ರೀ ಪ್ರಶಸ್ತಿಯೂ ಬಂದಿದೆ.

1947ರ ಆಗಸ್ಟ್‌ 1ರಂದು ಜನಿಸಿದ ಅವರು, ಬಿ.ಕಾಂ ಪದವೀಧರ. ಮೂರು ಅವಧಿಗೆ (1990-1996, 2008-2014, 2014-2020) ರಾಜ್ಯಸಭಾ ಸದಸ್ಯರಾಗಿ ಅವರು ಕೆಲಸ ಮಾಡಿದ್ದಾರೆ. 2001ರಿಂದ 2007ರವರೆಗೆ ವಿಧಾನ ಪರಿಷತ್‌ ಸದಸ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News