×
Ad

ಬೆಳಗಾವಿ | ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ : ಹಲವರು ಸಿಲುಕಿರುವ ಶಂಕೆ?

Update: 2024-08-06 23:59 IST

ಬೆಳಗಾವಿ : ತಾಲ್ಲೂಕಿನ ನಾವಗೆ ಗ್ರಾಮದ ಹೊರ ವಲಯದಲ್ಲಿರುವ ಟಿಕ್ಸೊ ಟೇಪ್‌ (ಅಂಟು) ಕಾರ್ಖಾನೆಯಲ್ಲಿ ಬೃಹತ್‌ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಕಾರ್ಖಾನೆಯೊಳಗೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ನೇಹಂ ಎಂಬ ಟಿಕ್ಸೊ ಟೇಪ್‌ ತಯಾರಿಸುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸುಮಾರು 60ಕ್ಕೂ ಹೆಚ್ಚು ಜನ ಒಳಗೆ ಇದ್ದರು ಎಂಬ ಮಾಹಿತಿ ಇದ್ದು, ಈ ಕಾರ್ಖಾನೆಯಲ್ಲಿ ಮೂರು ಶಿಫ್ಟ್‌ಗಳಲ್ಲಿ ತಲಾ 74 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಂಕಿ ಆವರಿಸಿಕೊಂಡಾಗ ಹೊರಗೆ ಬರಲು ಅನೇಕರು‌ ಪರದಾಡುತ್ತಿದ್ದರು ಎನ್ನಲಾಗಿದೆ. ಬೆಂಕಿ ಕೆನ್ನಾಲಿಗೆ ನಂದಿಸಲು ಪೊಲೀಸರು, ಗ್ರಾಮಸ್ಥರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳದಲ್ಲಿ ಜಿಲ್ಲಾಧಿಕಾರಿ ಮಹಮ್ಮದ್‌ ರೋಷನ್‌, ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News