ಬೆಳಗಾವಿ | ನಡುರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ
Update: 2025-08-11 17:00 IST
ಸಾಂದರ್ಭಿಕ ಚಿತ್ರ | PC : freepik
ಬೆಳಗಾವಿ : ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಾಕಾ ಹತ್ತಿರ ಸೋಮವಾರ ಮಧ್ಯಾಹ್ನ ನಡೆದಿವುದು ವರದಿಯಾಗಿದೆ.
ಕೊಲೆಯಾದ ವ್ಯಕ್ತಿ ಹುಕ್ಕೇರಿ ತಾಲೂಕಿನ ಅವರಗೋಳ ಗ್ರಾಮದ ಮಲ್ಲಿಕಜಾನ ಎಂದು ತಿಳಿದು ಬಂದಿದೆ.
ಸೋಮವಾರ ಈ ಘಟನೆ ನಡೆದಿದ್ದು, ಪೊಲೀಸರು ಧಾವಿಸಿ ತನಿಖೆ ನಡೆಸುತ್ತಿದ್ದಾರೆ. ನಡು ರಸ್ತೆಯಲ್ಲಿ ನಡೆದ ಈ ಭೀಕರ ಹತ್ಯೆಯಿಂದ ಸ್ಥಳದಲ್ಲಿ ಭಯದ ವಾತಾವರಣದ ನಿರ್ಮಾಣವಾಗಿದೆ.