×
Ad

ಬೆಳಗಾವಿ | ನರೇಗಾ ಕಾರ್ಮಿಕರಿದ್ದ ವಾಹನ ಪಲ್ಟಿ: 25ಕ್ಕೂ ಅಧಿಕ ಮಂದಿ ಗಾಯ

Update: 2025-01-23 17:35 IST

ಬೆಳಗಾವಿ : ನರೇಗಾ ಕಾರ್ಮಿಕರನ್ನು ತುಂಬಿಕೊಂಡು ಕೆಲಸಕ್ಕೆ ಹೊರಟಿದ್ದ ಗೂಡ್ಸ್ ವಾಹನವೊಂದು ಪಲ್ಟಿಯಾಗಿ 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲ್ಲೂಕಿನ ಹೊಸುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್‌ಗೆ ನರೇಗಾ ಕೆಲಸಕ್ಕೆ 30ಕ್ಕೂ ಅಧಿಕ ಜನ ಹೊರಟಿದ್ದರು. ಅಡ್ಡಬಂದ ಬುಲೆಟ್ ಬೈಕ್‌ ತಪ್ಪಿಸಲು ಹೋಗಿ ಗೂಡ್ಸ್ ವಾಹನ ನಿಯಂತ್ರಣ ತಪ್ಪಿದ್ದು, ವಾಹಣ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕಾರ್ಮಿಕರ ತಲೆ ಭಾಗಕ್ಕೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News