×
Ad

ಬೆಳಗಾವಿ: ಕಬ್ಬಿಗೆ ಸೂಕ್ತ ದರ ನಿಗದಿಗೆ ಆಗ್ರಹ; ತೀವ್ರಗೊಳ್ಳುತ್ತಿರುವ ರೈತರ ಹೋರಾಟ

Update: 2025-11-05 12:10 IST

ಬೆಳಗಾವಿ: ಕಬ್ಬು ಬೆಲೆಯ ಕುರಿತು ಸರ್ಕಾರದಿಂದ ಸ್ಪಷ್ಟನೆ ಬಾರದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್‌ನಲ್ಲಿ ರೈತರು ಭಾರೀ ಹೋರಾಟಕ್ಕೆ ಇಳಿದಿದ್ದಾರೆ.

ಟನ್‌ಗೆ ₹3,500 ದರ ನಿಗದಿಪಡಿಸಬೇಕೆಂಬ ಆಗ್ರಹದೊಂದಿಗೆ ರೈತರು ಧರಣಿ ನಡೆಸುತ್ತಿದ್ದು, ರಸ್ತೆಯಲ್ಲೇ ಅಡುಗೆ ಮಾಡಿಕೊಂಡು ಪ್ರತಿಭಟನೆ ಮುಂದುವರಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಧರಣಿ ನಡೆಯುತ್ತಿದ್ದು, ಹೋರಾಟಕ್ಕೆ ದಿನೇದಿನೇ ಬೆಂಬಲ ಹೆಚ್ಚಾಗುತ್ತಿದೆ.

ಹೋರಾಟದ ತೀವ್ರತೆಯ ನಡುವೆಯೇ ಒಬ್ಬ ರೈತ ತನ್ನ ದೇಹದ ಮೇಲೆ "₹3,500 our right" ಎಂಬ ಸಂದೇಶದ ಟ್ಯಾಟೂ ಹಾಕಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಸಾವಿರಾರು ರೈತರು ಭಾಗವಹಿಸಿದ್ದು, ಕಬ್ಬು ಬೆಲೆ ನಿಗದಿಯ ವಿಚಾರದಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ಇನ್ನಷ್ಟು ಉಗ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯ ಪೊಲೀಸ್ ಇಲಾಖೆ ಭದ್ರತೆಗಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News