ಬೆಳಗಾವಿ | ಪ್ರತಿಭಟನೆ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ
Update: 2025-11-04 13:15 IST
ಬೆಳಗಾವಿ : ಗುರ್ಲಾಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರೈತನೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮಾಹಿತಿ ಪ್ರಕಾರ, ಕಳೆದ ಕೆಲವು ದಿನಗಳಿಂದ ಗುರ್ಲಾಪುರದಲ್ಲಿ ರೈತರು ತಮ್ಮ ಹಕ್ಕು ಮತ್ತು ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತನೊರ್ವ ವಿಷ ಸೇವಿಸಿದ್ದಾರೆಂದು ತಿಳಿದುಬಂದಿದೆ.
ರೈತನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನೆ ಸ್ಥಳಕ್ಕೆ ಪೊಲೀಸರು ಹಾಗೂ ಆಡಳಿತಾಧಿಕಾರಿಗಳು ಧಾವಿಸಿದ್ದು, ರೈತರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಷ ಸೇವನೆ ಪ್ರಕರಣದ ನಂತರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ರೈತ ಸಂಘಟನೆಗಳು ಸರ್ಕಾರ ತಕ್ಷಣ ರೈತರ ಬೇಡಿಕೆಗಳನ್ನು ಪರಿಗಣಿಸಬೇಕೆಂದು ಆಗ್ರಹಿಸಿವೆ.