×
Ad

ಬೆಳಗಾವಿ | ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ: ಆರೋಪಿ ಬಂಧನ

Update: 2026-01-14 12:59 IST

ಬೆಳಗಾವಿ : ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯನೊಬ್ಬನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗಾಂಜಾ ಪತ್ತೆಯಾಗಿದ್ದು, ಮಾಳಮಾರುತಿ ಪೊಲೀಸರು ಆರೋಪಿತ ವೈದ್ಯನನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಪೊಲೀಸ್ ಠಾಣೆಯ ಸಿಬ್ಬಂದಿ ವೈದ್ಯನ ಮನೆ ಮೇಲೆ ದಾಳಿ ನಡೆಸಿದ್ದು, ಶನಿವಾರ ನಡೆದ ಈ ಕಾರ್ಯಾಚರಣೆಯಲ್ಲಿ ಆರೋಪಿಯ ಬೆಡ್ ರೂಮ್‌ನಲ್ಲಿ ಬಚ್ಚಿಟ್ಟಿದ್ದ 134 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ರಾಹುಲ್ ವಿಠಲ್ ಬಂಟಿ ಎಂದು ಗುರುತಿಸಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದ ಆತ, ಗಾಂಜಾ ಸೇವನೆ ಮಾಡಿಕೊಂಡು ರೋಗಿಗಳ ತಪಾಸಣೆ ನಡೆಸುತ್ತಿದ್ದನೆಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಪೊಲೀಸರು ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ ಬಳಿಕ ದಾಳಿ ನಡೆಸಿದ್ದಾರೆ.

ಆರೋಪಿತ ವೈದ್ಯ ರಾಹುಲ್ ವಿಠಲ್ ಬಂಟಿಯನ್ನು ಬಂಧಿಸಿ, ಆತನ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News