×
Ad

ಬೆಳಗಾವಿ ಅಧಿವೇಶನ | ವಿಧಾನಸಭೆಯಲ್ಲಿ ವಿವಿಧ ವಿಧೇಯಕಗಳಿಗೆ ಅಂಗೀಕಾರ

Update: 2024-12-16 20:19 IST

ಬೆಳಗಾವಿ : 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‍ವೇಗಳ ವಿಧೇಯಕ, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ(ತಿದ್ದುಪಡಿ) ವಿಧೇಯಕ, ಚಾಣಕ್ಯ ವಿಶ್ವವಿದ್ಯಾಲಯ(ತಿದ್ದುಪಡಿ) ವಿಧೇಯಕ, ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಹಾಗೂ ಕರ್ನಾಟಕ ಅಂತರ್ಜಲ(ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯ ಹಾಗೂ ನಿಯಂತ್ರಣ)(ತಿದ್ದುಪಡಿ) ವಿಧೇಯಕ ಹಾಗೂ ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ವಿಧೇಯಕ ಮಂಡನೆ-ವಾಪಸ್: 2024ನೇ ಸಾಲಿನ ಕರ್ನಾಟಕ(ಖಜಿನ ಹಕ್ಕುಗಳು ಮತ್ತು ಖನಿಜ ಹೊಂದಿರುವ ಭೂಮಿ) ತೆರಿಗೆ ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. 2024ನೇ ಸಾಲಿನ ಕರ್ನಾಟಕ ವಿಧಾನಮಂಡಲ(ಅನರ್ಹತಾ ನಿವಾರಣೆ)(ತಿದ್ದುಪಡಿ) ವಿಧೇಯಕವನ್ನು ಹಿಂಪಡೆಯಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News