×
Ad

ಬೆಳಗಾವಿ | ಗರ್ಭಿಣಿ ಪತ್ನಿಯ ಅನುಮಾನಾಸ್ಪದ ಸಾವು: ಪತಿ ಪೊಲೀಸ್ ವಶಕ್ಕೆ

Update: 2025-08-09 16:19 IST

ಬೆಳಗಾವಿ: ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಅನಿತಾ ನೀಲದಕರ್(25) ಎಂದು ಗುರುತಿಸಲಾಗಿದೆ. ಈ ಸಂಬಂಧ ಅನಿತಾರ ಪತಿ ನೀಲೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫಿಝಾ ಹಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಅನಿತಾ ಹಾಗೂ ನೀಲೇಶ್ ಪರಸ್ಪರ ಪ್ರೀತಿಸಿ ನಾಲ್ಕು ತಿಂಗಳ ಹಿಂದೆಯಷ್ಟೆ ಮದುವೆ ಆಗಿದ್ದರು ಎನ್ನಲಾಗಿದೆ.

ಇಂದು ಬೆಳಗ್ಗೆ ಅನಿತಾರ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ನೀಲೇಶ್ ಹಾಗೂ ಆತನ ಮನೆಮಂದಿ ಅನಿತಾರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಅನಿತಾರ ಮನೆಯವರು ಪೊಲೀಸ್ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ನೀಲೇಶನನ್ನು ಬೆಳಗಾವಿ ಗ್ರಾಮೀಣ ಠಾಣಾ ಪೊಲೀಸರು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News