×
Ad

ಬೆಳಗಾವಿ | ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೂವರು ಯುವಕರಿಗೆ ಚೂರಿ ಇರಿತ

Update: 2024-09-18 11:06 IST

ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆಯ ವೇಳೆ ಕ್ಷುಲ್ಲಕ ವಿಚಾರಕ್ಕೆ ಮೂವರು ಯುವಕರ ಮೇಲೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಮಂಗಳವಾರ ತಡರಾತ್ರಿ ರಾಣಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.

ದರ್ಶನ್ ಪಾಟೀಲ, ಪ್ರವೀಣ ಗುಂಡ್ಯಾಗೋಳ ಮತ್ತು ಸತೀಶ ಪೂಜಾರಿ ಎಂಬವರು ಚೂರಿ ಇರಿತಕ್ಕೊಳಗಾದವರು. ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದರಿಂದ ತೀವ್ರ ಅಸ್ವಸ್ಥರಾದ ಈ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆರವಣಿಗೆಯಲ್ಲಿ ಭಾರೀ ಜನಸಂದಣಿಯಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಕಾಲು ತಗುಲಿದ ವಿಚಾರವಾಗಿ ಎಂಬ ಕ್ಷುಲ್ಲಕ ಕಾರಣಕ್ಕೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಚಾಕುವಿನಿಂದ ದಾಳಿ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.

ಜಿಲ್ಲಾಸ್ಪತ್ರೆಗೆ ಎಪಿಎಂಸಿ ಠಾಣೆ ಪೊಲೀಸರ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News