×
Ad

ಬಿಜೆಪಿಗರು ದ್ವೇಷ ಭಾಷಣದ ಪಿತಾಮಹರು: ಡಿ.ಕೆ ಶಿವಕುಮಾರ್‌

"ಚಿನ್ನಸ್ವಾಮಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುವ ಬಗ್ಗೆ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ"

Update: 2025-12-11 12:46 IST

ಬೆಳಗಾವಿ (ಸುವರ್ಣ ವಿಧಾನಸೌಧ), ಡಿ. 11: ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಬಿಜೆಪಿವವರು. ಹೀಗಾಗಿ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ವಿಧೇಯಕ’ ಮಂಡನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಂವಿಧಾನದ ಆಶಯಗಳ ಪ್ರಕಾರ ಬಿಜೆಪಿಯವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ. ದ್ವೇಷ ಭಾಷಣ ಮಾಡದೇ ಹೋದರೆ ಯಾವುದೇ ಸಮಸ್ಯೆಯೇ ಇರುವುದಿಲ್ಲ. ಸಂವಿಧಾನದ ರಕ್ಷಣೆಗೆ ನಾವು ಈ ವಿಧೇಯಕವನ್ನು ಮಂಡಿಸುವ ಮೂಲಕ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.

ಸಿಎಂ ಉತ್ತರಿಸುತ್ತಾರೆ :

ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಮವರು ಉತ್ತರ ನೀಡುತ್ತಾರೆ ಎಂದ ಅವರು, ಬ್ಯಾಲೆಟ್ ಪತ್ರದ ಮೂಲಕ ಚುನಾವಣೆ ನಡೆಯುತ್ತಿದ್ದ ವೇಳೆ ಯಾವುದೇ ಮತಗಳ್ಳತನ ಆಗುತ್ತಿರಲಿಲ್ಲ. ಅಮಿತ್ ಶಾ ಅವರು ಈ ಬಗ್ಗೆ ಕನಿಷ್ಟ ಜ್ಞಾನ ಹೊಂದಿರಬೇಕು. ಅವರ ಕಾಲದಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿತ್ತು. ಹೀಗಿರುವಾಗ ಮತ ಕಳ್ಳತನ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಕೆಎಸ್‍ಸಿಎ ಮನವಿ ಬಗ್ಗೆ ಮುಕ್ತ ಮನಸ್ಸಿನಲ್ಲಿದ್ದೇವೆ :

ಕೆಎಸ್‍ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನನ್ನನ್ನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಅವರು ಮನವಿ ನೀಡಿದ್ದು, ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರ್ಘಟನೆ ಆಗಬಾರದಿತ್ತು. ಆದರೂ ಆಗಿದೆ. ಅನೇಕ ತಪ್ಪುಗಳು ನಡೆದಿವೆ. ಇವುಗಳನ್ನು ಸರಿಪಡಿಸಿಕೊಂಡು, ಪ್ರತ್ಯೇಕ ಮಾರ್ಗಸೂಚಿ ಅನುಸಾರ ಜನ ಸಂದಣಿ ನಿಯಂತ್ರಣ ಮಾಡಬೇಕಾಗುತ್ತದೆ ಎಂದರು.

ಈ ವಿಚಾರದಲ್ಲಿ ನಾನು ವೈಯಕ್ತಿಕವಾಗಿ ಮುಕ್ತ ಮನಸ್ಸಿನಿಂದ ಇದ್ದೇನೆ. ನಮ್ಮ ರಾಜ್ಯದ ಗೌರವ ಹಾಳು ಮಾಡಿಕೊಳ್ಳುವುದು ಬೇಡ. ಈ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News