ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್‌ನಿಂದ ಸುವರ್ಣಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ
Update: 2025-12-17 12:58 IST
ಬೆಳಗಾವಿ : ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಬುಧವಾರ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸಚಿವರು, ಶಾಸಕರು ಪಾಲ್ಗೊಂಡಿದ್ದರು. ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ನಾಯಕರು ಬಿಜೆಪಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿದರು.