×
Ad

ಸಿಎಂ ಸಿದ್ದರಾಮಯ್ಯರಿಂದ ಸದನಕ್ಕೆ ಸುಳ್ಳು ಮಾಹಿತಿ: ಎಚ್.ವಿಶ್ವನಾಥ್

Update: 2024-12-16 20:05 IST

ಎಚ್.ವಿಶ್ವನಾಥ್

ಬೆಳಗಾವಿ (ಸುವರ್ಣ ವಿಧಾನಸೌಧ) : ‘ಸಿದ್ದರಾಮಯ್ಯನವರು ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಇಂತಹ ಮುಖ್ಯಮಂತ್ರಿಯನ್ನು ಈವರೆಗೆ ನಾನು ನೋಡಿಯೇ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಗ್ರಂಥಾಲಯಗಳ ಬಗ್ಗೆ ಸಚಿವ ಮಧು ಬಂಗಾರಪ್ಪ ಅವರಿಗೆ ಎಚ್.ವಿಶ್ವನಾಥ್ ಪ್ರಶ್ನೆ ಕೇಳುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶಭರಿತರಾದರು.

ಪಂಚಮಸಾಲಿ ಮೀಸಲಾತಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಸದನಕ್ಕೆ ಉತ್ತರ ಕೊಡುವ ವೇಳೆ ಎಸ್‍ಸಿಎಸ್‍ಪಿ-ಟಿಎಸ್‍ಪಿಗೆ ಇಡೀ ದೇಶದಲ್ಲಿ ಕೇಂದ್ರ ಸರಕಾರ 60 ಸಾವಿರ ಕೋಟಿ ರೂ. ಮಾತ್ರ ಕೊಟ್ಟಿರುವುದು ಎಂಬುದಾಗಿ ಹೇಳಿದ್ದರು. ಈ ಮಾಹಿತಿ ಶುದ್ಧ ಸುಳ್ಳು. ಕೇಂದ್ರದ ಬಜೆಟ್ ಓದದೇ ಇದ್ದರೆ ಇವರು ಎಂತಹ ಮುಖ್ಯಮಂತ್ರಿ. ಕೇಂದ್ರ ಸರಕಾರ ಎಸ್‍ಸಿಎಸ್‍ಪಿ-ಟಿಎಸ್‍ಪಿಗೆ 2.60 ಲಕ್ಷ ಕೋಟಿ ರೂ. ಹಣ ಬಿಡುಗಡೆಗೊಳಿಸಿದೆ. ಇದು ಗೊತ್ತಿಲ್ಲದೆ ಸಿದ್ದರಾಮಯ್ಯ ಸುಮ್ಮನೆ ಮಾತನಾಡುವುದು ಸರಿಯಲ್ಲ ಎಂದು ಎಚ್.ವಿಶ್ವನಾಥ್ ಕಿಡಿಕಾರಿದರು.

ಎಸ್‍ಸಿಎಸ್‍ಪಿ-ಟಿಎಸ್‍ಪಿ ಅನ್ನು ಇಡೀ ದೇಶದಲ್ಲಿ ತಾನೊಬ್ಬನೇ ತಂದಿದ್ದೇನೆಂದು ಸಿದ್ದರಾಮಯ್ಯ ಬೆನ್ನು ತಟ್ಟಿಕೊಳ್ಳುತ್ತಾರೆ. ಎಸ್‍ಸಿಎಸ್‍ಪಿ-ಟಿಎಸ್‍ಪಿ ಹಣ ಸ್ವತಂತ್ರ ಬಂದಾಗಿನಿಂದ ಇದೆ. ಸಿಎಂ ಸಿದ್ದರಾಮಯ್ಯ ಎಷ್ಟೆಲ್ಲಾ ಸುಳ್ಳು ಹೇಳುತ್ತಾರೆ ಎಂದು ಎಚ್.ವಿಶ್ವನಾಥ್ ದೂರಿದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News