ನಿಪ್ಪಾಣಿ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ ನಿಧನ
Update: 2025-06-18 12:31 IST
ಕಾಕಾಸಾಹೇಬ ಪಾಟೀಲ್ (70)
ಬೆಳಗಾವಿ: ಇಲ್ಲಿನ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ್ (70) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಕೆಲ ವರ್ಷಗಳಿಂದ ಅವರು, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. ತಿಂಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಿಗ್ಗೆಯಿಂದ ಅವರ ಆರೋಗ್ಯ ಸ್ಥಿತಿ ತೀವ್ರ ಕ್ಷೀಣಿಸಿತ್ತು. ಬುಧವಾರ ನಸುಕಿನಲ್ಲಿ ಕೊನೆಯುಸಿರೆಳೆದರು.
ಕಾಕಾಸಾಹೇಬ ಪಾಟೀಲ್ 1999ರಿಂದ 2013ರ ವರೆಗೆ ಸತತ ಮೂರು ಬಾರಿ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬೆಂಬಲಿಗರನ್ನು ಮೃತರು ಅಗಲಿದ್ದಾರೆ.