ಗೋಕಾಕ್ ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಶಿಕ್ಷಕ ಪೊಲೀಸ್ ವಶಕ್ಕೆ
Update: 2026-07-22 23:57 IST
ಬೆಳಗಾವಿ : ಜಿಲ್ಲೆಯ ಗೋಕಾಕ್ ನಗರದಲ್ಲಿರುವ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ವರದಿಯಾಗಿದೆ.
ಕೋಚಿಂಗ್ ಸೆಂಟರ್‌ನ ಶಿಕ್ಷಕನೇ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ, ಪೋಷಕರು ಕೋಚಿಂಗ್ ಸೆಂಟರ್ ಎದುರು ಪ್ರತಿಭಟನೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗೋಕಾಕ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.