×
Ad

ಬೆಳಗಾವಿ | ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ

Update: 2024-12-26 12:07 IST

ಬೆಳಗಾವಿ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿದರು. 

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News