×
Ad

ಪಾದಯಾತ್ರೆ ಮುಗಿದ ಬೆನ್ನಲ್ಲೇ ಯತ್ನಾಳ್, ಜಾರಕಿಹೊಳಿ ನೇತೃತ್ವದಲ್ಲಿ ಬಿಜೆಪಿ ʼಅತೃಪ್ತʼ ನಾಯಕರ ಸಭೆ!

Update: 2024-08-11 13:40 IST

ಬಸನಗೌಡ ಪಾಟೀಲ್ ಯತ್ನಾಳ್/ ರಮೇಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ನಾಯಕರ ʼಮೈಸೂರು ಚಲೋʼ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಪಾದಯಾತ್ರೆಯಿಂದ ದೂರ ಉಳಿದಿದ್ದ ಬಿಜೆಪಿ ನಾಯಕರು ಮತ್ತೆ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್  ನೇತೃತ್ವದಲ್ಲಿ ಬಿಜೆಪಿ ಅತೃಪ್ತ ಶಾಸಕರು ಹಾಗೂ ನಾಯಕರ ಸಭೆ ಕುತೂಹಲ‌ ಮೂಡಿಸಿದೆ.

ಈ ಸಭೆಯಲ್ಲಿ ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಅಣ್ಣಸಾಹೇಬ್ ಜೊಲ್ಲೆ, ಬಿ.ಬಿ ನಾಯಕ್ ಸೇರಿ ಹಲವು ಮುಖಂಡರುಗಳು ರಮೇಶ್ ಜಾರಕಿಹೊಳಿ, ಯತ್ನಾಳ್ ಗೆ ಸಾಥ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡ ಬಿಜೆಪಿಯ ಈ ನಾಯಕರು ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News