×
Ad

"ಬಸವ ತಾಲಿಬಾನಿಗಳು"; ವಿವಾದಾತ್ಮಕ ಹೇಳಿಕೆ ನೀಡಿದ ಕಾಡಸಿದ್ದೇಶ್ವರ ಸ್ವಾಮೀಜಿ

Update: 2025-12-01 13:18 IST

ಬೆಳಗಾವಿ : ಮಹಾರಾಷ್ಟ್ರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಂದು(ಡಿ.1) ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಘಟಕದ ವತಿಯಿಂದ ಆಯೋಜಿಸಿದ್ದ ಹನುಮ ಮಾಲೆ ಧೀಕ್ಷಾ ಕಾರ್ಯಕ್ರಮದಲ್ಲಿ ಸ್ವಾಮೀಜಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಭಾಷಣದಲ್ಲಿ ಬಸವ ತತ್ವದ ಅನುಯಾಯಿಗಳನ್ನು “ಬಸವ ತಾಲಿಬಾನಿಗಳು” ಎಂದು ಉಲ್ಲೇಖಿಸಿರುವ ಸ್ವಾಮೀಜಿ, “ರಾತ್ರಿ ಟೀ-ಶರ್ಟ್, ಬರ್ಮೂಡ ಹಾಕಿ ಬಾರ್–ಹೋಟೆಲ್‌ಗಳಿಗೆ ಹೋಗುವವರು ಮಠಗಳನ್ನು ಹಾಳು ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಈ ಹಿಂದೆ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಬಾಗಲಕೋಟೆ, ವಿಜಯಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಪ್ರವೇಶ ನಿಷೇಧವನ್ನು ಸ್ವಾಮೀಜಿ ಎದುರಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News