Khanapur | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ: ಆರೋಪಿ ಬಂಧನ
Update: 2026-02-27 01:52 IST
ಸಾಂದರ್ಭೀಕ ಚಿತ್ರ
ಖಾನಾಪುರ: ಸರಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾದ 232 ಕೆ.ಜಿ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಗೆ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಖಾನಾಪುರದ ಅಜಾಜ್ ಸಿಕಂದರ ಶಿರಸಂಗಿ (25) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪಟ್ಟಣದಿಂದ ಬೆಳಗಾವಿ ಕಡೆಗೆ ಅಕ್ಕಿ ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ಕಿ ಮೂಟೆಗಳನ್ನು ವಶಕ್ಕೆ ಪಡೆದಿದ್ದಾರೆ.