×
Ad

ದೇವದಾಸಿ ಮಹಿಳೆಯರಿಗೂ ʼಗೃಹಲಕ್ಷ್ಮೀʼ ನೆರವು : ಲಕ್ಷ್ಮೀ ಹೆಬ್ಬಾಳ್ಕರ್

Update: 2024-12-13 19:09 IST

ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತೀ ತಿಂಗಳು 2ಸಾವಿರ ರೂ. , ಆರ್ಥಿಕ ಸಹಾಯ ಯೋಜನೆಯಡಿ 30ಸಾವಿರ ರೂ. ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6018 ದೇವದಾಸಿ ಮಹಿಳೆಯರನ್ನು ಸಮೀಕ್ಷೆಯಲ್ಲಿ ಗುರುತಿಸಿದ್ದು 2653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು. ಅನಿಷ್ಟ ಪದ್ಧತಿಯಾದ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News