×
Ad

ಗಡಿಭಾಗ ಜಿಲ್ಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬೋಧನೆಗೆ ಕ್ರಮ : ಮಧುಬಂಗಾರಪ್ಪ

Update: 2025-12-18 14:23 IST

ಬೆಳಗಾವಿ : ರಾಜ್ಯದ ಬೆಳಗಾವಿ, ಬೀದರ್, ಚಾಮರಾಜನಗರ ಸೇರಿದಂತೆ ಗಡಿ ಭಾಗದ ಜಿಲ್ಲೆಗಳಲ್ಲಿನ ಸರಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬೋಧನೆ ಮಾಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಶರಣು ಸಲಗಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಆಂಗ್ಲ ಮಾಧ್ಯಮ ಶಿಕ್ಷಕರ ಇಂಡಕ್ಷನ್ ಕಾರ್ಯಕ್ರಮ ತರಬೇತಿಯು ಸರಕಾರಿ ಶಾಲಾ ಶಿಕ್ಷಕರನ್ನು ಆಂಗ್ಲ ಮಾಧ್ಯಮ ವಿಭಾಗಗಳಿಗೆ ಸಜ್ಜುಗೊಳಿಸಲು ವಿಶೇಷವಾಗಿ ಗ್ರಾಮೀಣ ಹಿನ್ನೆಲೆಯಿಂದ ಬಂದ ವೈವಿದ್ಯಮಯ ಕಲಿಯುವವರಿಗೆ ಆಂಗ್ಲ ಭಾಷಾ ಪ್ರಾವೀಣ್ಯತೆ, ಆತ್ಮವಿಶ್ವಾಸ, ಡಿಜಿಟಲ್ ಕೌಶಲ್ಯಗಳು ಮತ್ತು ಬೋಧನಾ ವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದರು.

ತರಗತಿಯ ಬೋಧನೆ ಮತ್ತು ಆಂಗ್ಲ ಭಾಷಾ ಕಲಿಕೆಯಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ಸಾಲಿನವರಗೆ ಎಲ್ಲ ಶಿಕ್ಷಕರನ್ನು ದ್ವಿ-ಭಾಷಾ ಮಾಧ್ಯಮ ಬೋಧನೆಗೆ ತರಬೇತುಗೊಳಿಸಲಾಗುತ್ತಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇಮಕ ಮಾಡಲು ಕ್ರಮ ವಹಿಸಲಾಗಿದೆ. ಸದರಿ ಹುದ್ದೆಗಳಲ್ಲಿ ದ್ವಿ-ಭಾಷಾ ಮಾಧ್ಯಮ ಭೋಧನೆಗೆ ಶಿಕ್ಷಕರನ್ನು ನೇಮಕ ಮಾಡಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News