×
Ad

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗುತ್ತಾರೆ:‌ ಶಾಸಕ ಯತ್ನಾಳ್

"ಲಾಬಿ ಮಾಡುವವರಿಗೆ ಸಿಎಂ ಹುದ್ದೆ ಸಿಗಲ್ಲ"

Update: 2025-10-29 23:37 IST

ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಬೆಳಗಾವಿ: ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಲಾಬಿ ಮಾಡುವವರಿಗೆ ಅದು ಸಿಗಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

‘ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಜಟಾಪಟಿ ಆರಂಭವಾಗಿದೆ. ಲಾಬಿ ನಡೆದಿದೆ. ಮಲ್ಲಿಕಾರ್ಜುನ ಖರ್ಗೆ ಚಿತ್ರದಲ್ಲಿ ಕಾಣಿಸುತ್ತಿಲ್ಲ. ಆದರೆ ರಾಜ್ಯದ ಸಾರಥ್ಯ ‘ಡಾರ್ಕ್‌ಹಾರ್ಸ್‌’ಗೆ ಸಿಗಲಿದೆ’ ಎಂದು ಅವರು ಹೇಳಿದರು.

‘ಖರ್ಗೆ ಮುಖ್ಯಮಂತ್ರಿ ಆಗಬೇಕೆಂದು ಕಾಯುತ್ತಿದ್ದಾರೆ. ಖರ್ಗೆ ಹೆಸರು ಬಂದಾಗ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ ಮತ್ತು ಇತರರು ಸ್ಪರ್ಧೆಯಿಂದ ಹೊರಗುಳಿಯುತ್ತಾರೆ’ ಎಂದರು.

‘ಎಂ.ಬಿ.ಪಾಟೀಲ್ ಅವರು ವಿಜಯಪುರದಿಂದ ಜನರನ್ನು ಕರೆದೊಯ್ದು ಬೆಂಗಳೂರಿನಲ್ಲಿ ಸಮಾವೇಶ ಮಾಡಿದರು. ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡುವ ಭಯ ಅವರಿಗಿದೆ. ಅದಕ್ಕೆ ಕೆಲ ಸ್ವಾಮೀಜಿಗಳನ್ನು ಕರೆತಂದು ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ಮಾಡಿಸುತ್ತಿದ್ದಾರೆ’ ಎಂದು ಆರೋಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News