ಬೆಳಗಾವಿ| ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಯುವಕ ಮೃತ್ಯು, ಮತ್ತೋರ್ವನ ಸ್ಥಿತಿ ಗಂಭೀರ
Update: 2025-11-12 23:04 IST
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಬಳಿ ಬುಧವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಬೈಲಹೊಂಗಲ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಕಾರು ಸಂಪೂರ್ಣ ನುಜ್ಜುನುಜ್ಜಾಗಿದೆ.
ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ.
ಅತೀಕ್ (24) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಒಟ್ಟು ನಾಲ್ವರು ಯುವಕರು ಪ್ರಯಾಣಿಸುತ್ತಿದ್ದರು. ಎಲ್ಲರೂ ಬೈಲಹೊಂಗಲ ಪಟ್ಟಣದವರು ಎಂದು ತಿಳಿದುಬಂದಿದೆ.
ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.