×
Ad

ಬೆಳಗಾವಿ : ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ದಾಳಿ

Update: 2024-02-07 14:17 IST

ಬೆಳಗಾವಿ:  ಗೋಕಾಕ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ  ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಫೆಕ್ಸ್ ಬ್ಯಾಂಕ್ ನಲ್ಲಿ ಮಾಡಿದ್ದ ಸಾಲ  ಮರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಸಕ್ಕರೆ ಕಾರ್ಖಾನೆ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಕಾರ್ಖಾನೆ  ಸ್ಥಾಪಿಸಿಲು ಸಂಬಧ 439 ಕೋಟಿ ರೂಪಾಯಿಯನ್ನು  ಬ್ಯಾಂಕ್ ನಲ್ಲಿ ಸಾಲ ಪಡೆದುಕೊಂಡಿದ್ದರು. ಆದರೆ ಪಡೆದ ಸಾಲ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಜ.5ರಂದು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್​ ಬ್ಯಾಂಕ್​ನಲ್ಲಿ ಸಾಲ ಪಡೆದು ಪಾವತಿಸದೇ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಬೆಂಗಳೂರಿನ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ವರದಿಯಾಗಿದೆ.

ಬಳಿಕ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಸಿಐಡಿ ವಹಿಸಿತ್ತು. ಅದರಂತೆ ಇಂದು ನಾಲ್ಕು ಸಿಐಡಿ ಅಧಿಕಾರಿಗಳು ರಮೇಶ್ ಜಾರಕಹೊಳಿ ಕಾರ್ಖಾನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News