×
Ad

ಭಾರತೀಯ ಮಹಿಳೆಯರಿಗೆ ಸ್ಫೂರ್ತಿ ಕಿತ್ತೂರು ರಾಣಿ ಚನ್ನಮ್ಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2024-10-23 23:22 IST

ಬೆಳಗಾವಿ: ʼಹೆಣ್ಣುಮಕ್ಕಳು ಮನೆಯಿಂದ ಹೊರ ಬಾರದಂತಹ ಪರಿಸ್ಥಿತಿಯಲ್ಲಿ ಕೆಚ್ಛೆದೆಯಿಂದ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಭಾರತೀಯ ಮಹಿಳೆಯರ ಪಾಲಿಗೆ ಇಂದಿಗೂ ಸ್ಫೂರ್ತಿಯಾಗಿದ್ದಾರೆʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ವೀರ ರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವ ಹಾಗೂ ಕಿತ್ತೂರು ಉತ್ಸವದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಸ್ವಾಭಿಮಾನಕ್ಕೆ ಇನ್ನೊಂದು ಹೆಸರೇ ಚೆನ್ನಮ್ಮ. ಮಹಿಳೆಯರು ಹೊರಗೆ ಬಾರದಂತಹ ಸ್ಥಿತಿ ಇದ್ದಾಗ ಹೊರಗೆ ಬಂದು ಬ್ರಿಟಿಷರ ವಿರುದ್ಧ ಹೋರಾಡಿದವರು ಚೆನ್ನಮ್ಮ. ಹೆಣ್ಣುಮಕ್ಕಳಿಗೆ ಆದರ್ಶವಾಗಿದ್ದಾರೆ ನಮ್ಮ ಚನ್ನಮ್ಮ ಎಂದು ಹೇಳಿದರು.

ಇಂದಿನ ಪೀಳಿಗೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಮರೆಯುತ್ತಿದೆ. ಆದರೆ, ಅದಾಗಬಾರದು, ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ, ಮೊದಲಾವರು ನಮಗೆ ಆದರ್ಶರಾಗಬೇಕು ಎಂದು ಸಚಿವರು ಕರೆ ನೀಡಿದರು.

ಸಮಾರಂಭದಲ್ಲಿ ಕಿತ್ತೂರು ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ, ನಿಚ್ಚಣಕಿಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮಿಗಳು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ್, ರಾಜು ಸೇಠ್, ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್, ಎಸ್ಪಿ ಭೀಮಾ ಶಂಕರ ಗುಳೇದ, ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ, ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರ ಕುಮಾರ್, ಮಾಜಿ ಶಾಸಕ ಶಾಮ ಘಾಟಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News