ಮುಖ್ಯಮಂತ್ರಿ ಇರುವಾಗ ಮತ್ತೆ ಆ ಹುದ್ದೆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ: ದಿನೇಶ್ ಗುಂಡೂರಾವ್
Update: 2024-06-28 15:19 IST
PC:fb/dineshgunduraoofficial
ಬಾಗಲಕೋಟೆ: ಮುಖ್ಯಮಂತ್ರಿ ಇರುವಾಗ ಮತ್ತೆ ಆ ಹುದ್ದೆ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ಧಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆ ಕುರಿತು ಪಕ್ಷದ ನಾಯಕರು ಸಾರ್ವಜನಿಕ ಚರ್ಚೆ ಮಾಡುತ್ತಿರುವುದು ಸರಿಯಲ್ಲ ಎಂದರು.
ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಬೇಕಾದ ವಿಷಯಗಳ ಬಗ್ಗೆ ಕೆಲ ಸಚಿವರು ವಿನಾಕಾರಣ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.