×
Ad

ಬೆಳಗಾವಿಯಲ್ಲಿ ಒಂದೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮತ್ತೊಂದೆಡೆ ಎಂಇಎಸ್‌ನಿಂದ ಕರಾಳ ದಿನಾಚರಣೆ

Update: 2025-11-01 11:30 IST

ಬೆಳಗಾವಿ : ಬೆಳಗಾವಿಯಲ್ಲಿ ಒಂದೆಡೆ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಮತ್ತೊಂದು ಕಡೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಕರಾಳ ದಿನಾಚರಣೆ ನಡೆಯಿತು.

ಕರ್ನಾಟಕ ರಾಜ್ಯೋತ್ಸವದ ವಿರೋಧವಾಗಿ ಎಂಇಎಸ್ ಕಾರ್ಯಕರ್ತರು ಬೆಳಗಾವಿಯ ಸಂಭಾಜಿ ಗಾರ್ಡನ್‌ನಲ್ಲಿ ಜಮಾಯಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಕರ್ನಾಟಕ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ʼಬೆಳಗಾವಿ, ಬೀದರ್, ಬಾಲ್ಕಿ, ಕಾರವಾರ, ನಿಪ್ಪಾಣಿ – ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು, ಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿದದರು.

ಪೊಲೀಸ್ ಬಂದೋಬಸ್ತ್:

ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News