×
Ad

ಬೆಳಗಾವಿ | ಸುವರ್ಣಸೌಧದಲ್ಲಿ ʼಅನುಭವ ಮಂಟಪ’ದ ತೈಲವರ್ಣ ಚಿತ್ರ ವೀಕ್ಷಿಸಿದ ಸಂಸದೆ ಪ್ರಿಯಾಂಕಾ ಗಾಂಧಿ

Update: 2025-01-21 17:44 IST

ಬೆಳಗಾವಿ : ʼಗಾಂಧಿ ಭಾರತʼ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಮಾವೇಶಕ್ಕೆ ಬೆಳಗಾವಿಗೆ ಆಗಮಿಸಿದ್ದ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸುವರ್ಣಸೌಧದಲ್ಲಿ ಅನಾವರಣ ಮಾಡಲಾಗಿದ್ದ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ ʼಅನುಭವ ಮಂಟಪʼದ ಬೃಹತ್ ತೈಲವರ್ಣ ಚಿತ್ರವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ‌.ವೇಣುಗೋಪಾಲ್ ವಿಧಾನಸಭಾ ಸ್ಪೀಕರ್‌ ಯು.ಟಿ.ಖಾದರ್‌, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಎಚ್‌.ಕೆ.ಪಾಟೀಲ್‌ ಇದ್ದರು.

ಇತ್ತೀಚಿಗೆ ನಡೆದ ಬೆಳಗಾವಿ ಅಧಿವೇಶನದ ಮೊದಲ ದಿನ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ʼಅನುಭವ ಮಂಟಪʼದ ತೈಲವರ್ಣವನ್ನು ಅನಾವರಣಗೊಳಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News