×
Ad

ವಸತಿ ಯೋಜನೆಯಡಿ ಸಹಾಯಧನ, ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವ ಪರಿಶೀಲನೆ : 2024-2025ನೇ ಸಾಲಿನಲ್ಲಿ 7,38,881 ಮನೆಗಳ ಹಂಚಿಕೆ : ರಾಮಲಿಂಗಾರೆಡ್ಡಿ

Update: 2025-12-17 21:48 IST

ಬೆಳಗಾವಿ : ರಾಜ್ಯದಲ್ಲಿ ವಿವಿಧ ವಸತಿ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಮತ್ತು ಘಟಕ ವೆಚ್ಚ ಹೆಚ್ಚಿಸುವ ಪ್ರಸ್ತಾವವು ಪರಿಶೀಲನೆಯಲ್ಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬುಧವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಡಿ.ಟಿ.ಶ್ರೀನಿವಾಸ್ ಪ್ರಶ್ನೆಗೆ ವಸತಿ ಸಚಿವ ಝಮೀರ್ ಅಹ್ಮದ್ ಪರವಾಗಿ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, 2024-2025ನೇ ಸಾಲಿನಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆ(ಗ್ರಾ)ಯಡಿ ಹಾಗೂ ರಾಜ್ಯ ಸರಕಾರದ ವಸತಿ ಯೋಜನೆಗಳಡಿ ಮರು ಹಂಚಿಕೆ ಮಾಡಲಾದ 36,150 ಮನೆಗಳನ್ನು ಒಳಗೊಂಡಂತೆ ಒಟ್ಟಾರೆ 7,38,881 ಮನೆಗಳನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದ್ದು, 3,27,747 ಮನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದರು.

ಅಲೆಮಾರಿ ಜನಾಂಗದವರಿಗೆ 2024-25ನೇ ಸಾಲಿನಲ್ಲಿ ಪ್ರತ್ಯೇಕವಾಗಿ ಗುರಿ ಹಂಚಿಕೆಯಾಗಿಲ್ಲ. ಅಲೆಮಾರಿ ವರ್ಗದ ವಸತಿ ರಹಿತರನ್ನು ಒಳಗೊಂಡಂತೆ ಎಲ್ಲಾ ವಸತಿ ರಹಿತರಿಗೆ ವಸತಿ ಸೌಕರ್ಯ ಒದಗಿಸಲಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News