×
Ad

ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸುಗಳ ನಿರಾಕರಣೆ; ಸಂಪುಟ ನಿರ್ಣಯ ಕೇಂದ್ರಕ್ಕೆ ಸಲ್ಲಿಕೆ : ಈಶ್ವರ್ ಖಂಡ್ರೆ

Update: 2025-12-16 16:56 IST

ಬೆಳಗಾವಿ : ಡಾ.ಕಸ್ತೂರಿ ರಂಗನ್ ಸಮಿತಿಯ ವರದಿಯ ಶಿಫಾರಸುಗಳನ್ನು ನಿರಾಕರಿಸುವ ಹಾಗೂ ವರದಿಯನ್ನು ಆಧರಿಸಿ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಸಂಬಂಧ ಕೇಂದ್ರ ಸರಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸಚಿವರ ಸಂಪುಟದ ನಿರ್ಣಯವನ್ನು ಅನುಸರಿಸಿ, ರಾಜ್ಯ ಸರಕಾರದ ನಿಲುವನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಮಂಗಳವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿ’ಸೋಜ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಾ.ಕಸ್ತೂರಿ ರಂಗನ್ ವರದಿಯು ಈವರೆಗೂ ಜಾರಿಯಾಗದೇ ಇರುವುದರಿಂದ ಮಲೆನಾಡು ಕರಾವಳಿ ಭಾಗದ ಜನರಿಗೆ ಯಾವುದೇ ತೊಂದರೆ ಇಲ್ಲ ಎಂದರು.

ಡಾ.ಕಸ್ತೂರಿ ರಂಗನ್ ಸಮಿತಿಯ ವರದಿಯನ್ನಾಧರಿಸಿ, ಕೇಂದ್ರ ಸರಕಾರವು ಹೊರಡಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವ ರಾಜ್ಯ ಸರಕಾರದ ಸ್ಪಷ್ಟ ನಿಲುವನ್ನು ಕೇಂದ್ರ ಸರಕಾರಕ್ಕೆ ಸಂವಹನಿಸಲಾಗಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News