ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ : ಸತೀಶ್ ಜಾರಕಿಹೊಳಿ
Update: 2024-12-03 20:42 IST
ಸತೀಶ್ ಜಾರಕಿಹೊಳಿ
ಬೆಳಗಾವಿ : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಎಐಸಿಸಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಈ ಬಗ್ಗೆ ಚರ್ಚೆ ನಡೆಯುತ್ತಿರುವುದು ನಿಜ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ವರಿಷ್ಠರ ಬಳಿ ಚರ್ಚೆಯೇ ಆಗಿಲ್ಲ, ಬಹಳಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಆಗಬೇಕಿರುವುದರಿಂದ ಅದು ನಡೆಯೋದು ಮಾತ್ರ ನಿಶ್ಚಿತ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಮಾಡುವಾಗ ಮತ ಸೆಳೆಯುವ, ಜನರ ಆಕರ್ಷಣೆ ಗುಣ ಇದ್ದವರು ಆದರೆ ಪಕ್ಷಕ್ಕೆ ಅನುಕೂಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನನ್ನನ್ನು ಪರಿಗಣಿಸಿದ್ರೆ ನಿಭಾಯಿಸುವೆ ಎಂದರು.